ದೇವಾಂಗ ಕುಲಗುರು ಆದ್ಯ ವಚನಕಾರ - ದೇವರ ದಾಸಿಮ್ಮಯ್ಯಜೀವನ ಚರಿತ್ರೆ
ಗುಲ್ಬರ್ಗಾ ಜಿಲ್ಲೆಯಲ್ಲಿರುವ ಸುರಪುರ ತಾಲ್ಲೂಕಿನ ಮುದನೂರು ಎಂಬ ಊರಿನಲ್ಲಿ ದೇವರ ದಾಸಿಮಯ್ಯನವರು ಜನಿಸಿದರು. ಈ ಊರಿನಲ್ಲಿ ಸುಮಾರು ದೇವರ ದೇವಾಲಯಗಳು ಇದೆ. ಎಲ್ಲಾ ಪಂಥಗಳ ದೇವ ಸ್ಥಾನಗಳನ್ನು ಹೊಂದಿದ ಕ್ಷೇತ್ರವಿದು. ಎಲ್ಲಕ್ಕಿಂತ ರಾಮನಾಥ ಎನ್ನುವ ದೇವರ ಮೇಲೆ ಹೆಚ್ಚಿನ ಪ್ರೀತಿ ದೇವರ ದಾಸಿಮಯ್ಯನವರಿಗೆ. ಈಗಾಗಿ ತಮ್ಮ ವಚನಗಳಿಗೆ "ರಾಮನಾಥ" ಎನ್ನುವ ನಾಮಾಂಕಿತ ವನ್ನು ನೀಡಿದ್ದಾರೆ. ಇವರು ನೇಯ್ಗೆ ವೃತ್ತಿಯಿಂದ ತಮ್ಮ ಜೀವನವನ್ನು ಸಾಗಿಸುತ್ತಿದ್ದರು. 10ನೇ ಶತಮಾನದಲ್ಲಿ ಬರುವ ಇವರು ಮೊಟ್ಟ ಮೊದಲ ವಚನಕಾರರಾಗಿದ್ದಾರೆ. ಇವರ ಪತ್ನಿ ದುಗ್ಗಳೆ. ಇಬ್ಬರದೂ ಅನ್ಯೋನ್ಯವಾದ ದಾಂಪತ್ಯ ಜೀವನ. ದೇವರನ್ನು ಒಲಿಸಲು ಮತ್ತು ಮುಕ್ತಿಯನ್ನು ಪಡೆಯಲು ಸನ್ಯಾಸಿಯ ಜೀವನ ಮಾಡಬೇಕಿಲ್ಲ, ವಿವಾಹ ಜೀವನದಲ್ಲಿಯೂ ಮೋಕ್ಷವನ್ನು ಪಡೆಯಬಹುದು ಮತ್ತು ಶಿವನ ಸಾಕ್ಷಾತ್ಕಾರವನ್ನು ಪಡೆಯಬಹುದೆಂದು ನಿರೂಪಿಸಿದವರು.
ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು ರಾಮನಾಥ ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ. ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ. ಇವರು ದೇವಾಂಗ/ ದೇವ ಬ್ರಾಹ್ಮಣ ದವರಿಗೆ ಕುಲಗುರುವಾಗಿರುತ್ತಾರೆ, ಇದನ್ನು ಈಗಿನ ಎಲ್ಲಾ ದೇವಾಂಗ ಜನಾಂಗದವರು ತಮ್ಮ ಪೀಳಿಗೆಗಳಿಗೆ ತಿಳಿಸಿ ಹೇಳಬೇಕು. ಅವರ ಬಗ್ಗೆ ತಿಳಿಸಕೊಡಬೇಕು.ಅನೇಕ ಪವಾಡಗಳನ್ನು ಮಾಡಿದ ಇವರು, ಪವಾಡವೊಂದೆ ಅಲ್ಲ, ಮನುಷ್ಯನ ಜೀವನದಲ್ಲಿ ದೇವರ ಸ್ಮರಣೆಯೂ ಹಾಗೂ ಜೀವನದಲ್ಲಿ ಸಾಧನೆಯೂ ಅಷ್ಟೇ ಪ್ರಮುಖವೆಂದು ನಂಬಿ ಭಕ್ತಿ ಸಾಧನೆಯಲ್ಲಿಯೇ ಬಹಳ ಹೆಸರನ್ನು ಪಡೆದವರು. ಒಂದು ರೀತಿಯಲ್ಲಿ ಎಲ್ಲರಿಗೂ ಶಿಕ್ಷಕರಾಗಿದ್ದರು. ಅನೇಕ ಮಹಾನ್ ವ್ಯಕ್ತಿಗಳನ್ನು ತಮ್ಮ ಭಕ್ತಿಯ ವಾದದಿಂದ ಸೋಲಿಸಿ, ಆಗಿನ ಕಾಲದಲ್ಲಿಯೇ ಪ್ರಸಿದ್ಧಿ ಪಡೆದು ಹೆಸರಾದವರು. ಶಿವನ ದರ್ಶನದಿಂದ ವರವನ್ನು ಪಡೆದ ಇವರು ಸರಳ, ಸಜ್ಜನಿಕೆಯ ಸ್ವಭಾವದವರಾಗಿದ್ದು, ಎಲ್ಲರಲ್ಲಿಯೂ ಭಕ್ತಿಯ ಸಿಂಚನವನ್ನು ಸಿಂಪಡಿಸಿದರು.
ಸಪ್ತ ತೀರ್ಥಗಳ ನಿಸರ್ಗ ಸೌಂದರ್ಯದ ನಡುವಿರುವ ಮುದನೂರು ಕಲಬುರ್ಗಿ ಜಿಲ್ಲೆಯ ಒಂದು ಹಳ್ಳಿ ಅದು ದಾಸಿಮಯ್ಯನ ಜನ್ಮಸ್ಥಳವು. ಆ ಊರಲ್ಲಿ ರಾಮನಾಥ ದೇವಾಲಯವಿದ್ದು ರಾಮನಾಥನೇ ದಾಸಿಮಯ್ಯನ ಆರಾಧ್ಯ ದೈವವು ಅವನ ವಚನಾಂಕಿತ ರಾಮನಾಥ ಎಂದಿದೆ. ಅವನ ತಂದೆಯ ಹೆಸರು ರಾಮಯ್ಯ ತಾಯಿ ಶಂಕರಿ ಅವರ ಮನೆತನದ ಉದ್ಯೋಗ ನೇಕಾರಿಕೆ ನೇಯ್ಕೆ ಕಾಯಕದಲ್ಲಿದ್ದರೂ ದಾಸಿಮಯ್ಯನಿಗೆ ಆತ್ಮಜ್ಞಾನದ ಹಸಿವು ಬಹಳವಾಗಿತ್ತು ಅದಕ್ಕಾಗಿ ಶ್ರೀಶೈಲಕ್ಕೆ ಹೋಗುತ್ತಾನೆ. ಪಂಡಿತಾರಾಧ್ಯ ಶಿವಾಚಾರ್ಯರಿಂದ ಶಿವದೀಕ್ಷೆ ಪಡೆದು ಸಾಧನೆ ಮಾಡಿ ಶಿವಜ್ಞಾನ ಸಂಪನ್ನನಾಗುತ್ತಾನೆ.
ಶಿವಜ್ಞಾನ ಸಂಪನ್ನನಾದ ದಾಸಿಮಯ್ಯನು ಲೋಕ ಕಲ್ಯಾಣದ ಕೈಂಕರ್ಯ ತೊಟ್ಟು ಚಾಲುಕ್ಯ ರಾಜ್ಯದ ಪೊಟ್ಟಲ ಕೆರೆಯತ್ತ ಸಾಗುತ್ತಾನೆ ದಾರಿಯಲ್ಲಿ ಶಿವಾನುಭವ ಗೋಷ್ಠಿಗಳನ್ನು ಮಾಡುತ್ತ ಸಾವಿರಾರು ಜನರಿಗೆ ಶಿವದೀಕ್ಷೆ ನೀಡುತ್ತಾನೆ. ಹಿಂಸಾವೃತ್ತಿಯಲ್ಲಿ ತೊಡಗಿದ್ದ ಬೇಡ ಜನಾಂಗಕ್ಕೆ ಬುದ್ದಿ ಹೇಳಿ ಅವರ ಮನ ಪರಿವರ್ತಿಸಿ ದೀಕ್ಷೆ ನೀಡಿ ಸನ್ಮಾರ್ಗಕ್ಕೆ ಹಚ್ಚುತ್ತಾನೆ. ನಂದಿ ಗ್ರಾಮದಲ್ಲಿ ಎದುರಾದ ವೈದಿಕರೊಡನೇ ವಾದ ವಿವಾದ ಮಾಡಿ ಜಯಸುತ್ತಾನೆ ಗೌಡಗೆರೆಗೆ ಬಂದು ಅಲ್ಲಿ ಅಸಂಖ್ಯಾತ ರೈತ ಜನಕ್ಕೆ ಜ್ಞಾನ ಬೋಧೆ ಮಾಡುತ್ತಾನೆ.
ಪೊಟ್ಟಲಕೆರೆಗೆ ಬಂದು ಅಲ್ಲಿಯ ಎಲ್ಲ ಜೈನ ಪಂಡಿತರನ್ನು ವಾದದಲ್ಲಿ ಸೋಲಿಸುತ್ತಾನೆ. ಅವರಿಗೆಲ್ಲ ಶಿವದೀಕ್ಷೆ ನೀಡುತ್ತಾನೆ. ಅಲ್ಲಿಯ ರಾಜ 2ನೇ ಜಯಸಿಂಹ ಮತ್ತು ರಾಣಿ ಸುಗ್ಗಲೆ ಇವನಿಂದ ಶಿವದೀಕ್ಷೆ ಪಡೆಯುತ್ತಾರೆ. ನಂತರ ದಾಸಿಮಯ್ಯನು ತನ್ನ ಊರಾದ ಮುದನೂರಿಗೆ ಬಂದು ನೇಯ್ಗೆ ಕಾಯಕ ಮಾಡಿಕೊಂಡು ಜನರಿಗೆ ಶಿವಾನುಭವ ನೀಡುತ್ತಾ ಜೀವನ ಸಾಗಿಸುತ್ತಾನೆ. ದೇವರ ದಾಸಿಮಯ್ಯನವರು ಯವ್ವನಾವಸ್ಥೆಗೆ ಬಂದಾಗ ಇವರ ಮದುವೆ ಪ್ರಸ್ತಾಪ ಬರುತ್ತದೆ. ಆಗ ಅವರು ಮದುವೆ ಬಗ್ಗೆ ಆಸಕ್ತಿ ತೋರಿಸಿರಲಿಲ್ಲ . ಕೊನೆಗೆ ತಂದೆ ತಾಯಿ , ಗುರು ಹಿರಿಯರ ಒತ್ತಾಯಕ್ಕೆ ಮಣಿದು ಒಂದು ಷರತ್ತಿನ ಮೇಲೆ ಮದುವೆಗೆ ಒಪ್ಪಿಗೆ ನೀಡುತ್ತಾರೆ. ದಾಸಿಮಯ್ಯನು ಕಬ್ಬಿನ ಜಲ್ಲೆ ಮರಳು ಮಿಶ್ರಿತ ಅಕ್ಕಿಯಿಂದ ನೀರು ಮತ್ತು ಸೌದೆ ಉಪಯೋಗಿಸದೆ ಪಾಯಸ ಮಾಡಿಕೊಡುವಂಥ ಜಾಣ ಕನ್ಯೆಯನ್ನು ವಿವಾಹವಾಗುವ ಶರತ್ತಿನ ಮೇಲೆ ದಾಸೀಮಯ್ಯನು ಮದುವೆಯಾಗುವ ಇಚ್ಛೆ ಉಳ್ಳವನಾಗಿ ಹೆಣ್ಣಿನ ಅನ್ವೇಷಣೆಯಲ್ಲಿ ತೊಡಗುತ್ತಾನೆ.
ಕೈಯಲ್ಲಿ ಕಬ್ಬಿನ ಜಲ್ಲೆ ಹಾಗೂ ಮರಳು ಮಿಶ್ರಿತ ಅಕ್ಕಿ ಗಂಟನ್ನು ಹಿಡಿದು ಕೊಂಡು ಕನ್ಯಾನ್ವೇಷಣೆಗೆ ಹೊರಡುತ್ತಾನೆ. ಹನ್ನೆರಡು ವರ್ಷ ಕಳೆದರೂ ಅಂಥ ಕನ್ಯೆ ಸಿಗುವುದಿಲ್ಲ. ಕಡೆಗೆ ಗುಲ್ಬರ್ಗ ಜಿಲ್ಲೆ ಗೊಬ್ಬೂರು ಗ್ರಾಮದ ಶಿವಶಕ್ತಿ ಸಂಪನ್ನರಾದ ಮಹಾದೇವಿ ಮತ್ತು ಮಲ್ಲಿಕಾರ್ಜುನರ ಶಿವಯೋಗಿ ದಂಪತಿಗಳಿಗೆ ತನ್ನ ಅಭಿಲಾಷೆಯನ್ನು ತಿಳಿಸುತ್ತಾನೆ. ಅವನ ಶರತ್ತು ಕೇಳಿ ಅಂಥ ಕನ್ಯೆ ನಿನಗೆ ಈ ಜನ್ಮದಲ್ಲಿ ಸಿಗಲಾರಳು ಎನ್ನುತ್ತಿರುವಾಗಲೇ ಅವರ ಮಾತನ್ನು ಆಲಿಸಿದ ಅವರ ಮಗಳು ದುಗ್ಗಳೆ ಅದೇಕೆ ಸಿಗಲಾರಳು? ಮಳಲಕ್ಕಿ ಪಾಯಸ ನಾನು ಮಾಡಿಕೊಡುವೆನೆಂದು ದಾಸಿಮಯ್ಯನ ಸವಾಲು ಸ್ವೀಕರಿಸುತ್ತಾಳೆ.

ದುಗ್ಗಳೆಯು ಕಬ್ಬುಗಳನ್ನು ತರಿಸಿ ಬುಡದ ಭಾಗ ಹಾಗೂ ತುದಿ ಭಾಗಗಳನ್ನು ಬೇರೆ ಬೇರೆ ಮಾಡಿ ಸಿಹಿರಸ ಹಾಗೂ ಸಪ್ಪೆರಸಗಳನ್ನು ಬೇರೆ ಬೇರೆ ಪಾತ್ರೆಗಳಲ್ಲಿ ಸಂಗ್ರಹಿಸುತ್ತಾಳೆ. ಕಬ್ಬಿನ ಸಿಪ್ಪೆ ಒಣಗಿಸಿ ಬೆಂಕಿ ಹೊತ್ತಿಸಿ ಸಪ್ಪೆ ಸರದ ಪಾತ್ರೆಯಲ್ಲಿ ಮರಳು ಮಿಶ್ರಿತ ಅಕ್ಕಿ ಹಾಕಿ ಕುದಿಸಲು ಪಾಕ ಸಿದ್ಧವಾಗುತ್ತದೆ. ಅದನ್ನು ಜಾಲಾಡಿ ತಳದಲ್ಲಿ ಮರಳು ಉಳಿಯುವಂತೆ ಮಾಡಿ ಮೇಲಿನ ಪಾಕನ್ನು ಸಿಹಿ ರಸದ ಪಾತ್ರೆಯಲ್ಲಿ ಕೂಡಿಸಿ ತಯಾರಾದ ಪಾಯಸವನ್ನು ದಾಸಿಮಯ್ಯನಿಗೆ ಕೊಡುತ್ತಾಳೆ. ಹೀಗೆ ನೀರು ಮುಟ್ಟದೆ ಸೌದೆ ಉಪಯೋಗಿಸದೆ ಮಳಲಕ್ಕಿ ಪಾಯಸ ತಯಾರಿಸಿಕೊಟ್ಟ ಚಿಕ್ಕ ಹುಡುಗಿ ದುಗ್ಗಳೆಯ ಜಾಣತನಕ್ಕೆೆ ಎಲ್ಲರೂ ಬೆರಳು ಕಚ್ಚುತ್ತಾರೆ. ಅವಳನ್ನು ಕೊಂಡಾಡುತ್ತಾರೆ. ದಾಸಿಮಯ್ಯನು ದುಗ್ಗಳೆಯನ್ನು ವಿವಾಹವಾಗುತ್ತಾನೆ. ಅವರಿಬ್ಬರ ನೇಯ್ಗೆ ಕಾಯಕ ಮಾಡಿಕೊಂಡು ಅನ್ಯೌನ್ಯತೆಯಿಂದ ಜೀವನ ಸಾಗಿಸುತ್ತಾರೆ.
ಸಂಸಾರ ಶ್ರೇಷ್ಠವೊ, ಸನ್ಯಾಸ ಶ್ರೇಷ್ಠವೊ: ಒಮ್ಮೆ ಇಬ್ಬರು ಸಾಧಕ ಯುವಕರಲ್ಲಿ ಸಂಸಾರ ಹಾಗೂ ಸನ್ಯಾಸ ಇವುಗಳಲ್ಲಿ ಯಾವುದು ಶ್ರೇಷ್ಠವೆಂಬ ವಿಷಯದಲ್ಲಿ ವಾದ ವಿವಾದ ನಡೆಯುತ್ತದೆ. ಇದರ ಪರಾಮರ್ಶೆಗೆ ಅವರಿಬ್ಬರು ಅನುಭಾವಿ ಶರಣ ದಾಸಿಮಯ್ಯನಲ್ಲಿಗೆ ಬರುತ್ತಾರೆ. ಅವರಿಗೆ ಆದಾರಾತಿಥ್ಯ ಮಾಡಿ ಕೂಡ್ರಿಸಿದ ದಾಸಯ್ಯನು ಎಳೆ ಬಿಸಿಲಿನಲ್ಲಿ ಕುಳಿತು ಕಾಯಕ ನಿರತನಾಗಿ ದುಗ್ಗಳೆಗೆ ದೀಪ ಹಚ್ಚಿ ತರಲು ಹೇಳುತ್ತಾನೆ. ದುಗ್ಗಳೆ ದೀಪ ಹಚ್ಚಿ ತಂದು ಬಿಸಿಲಲ್ಲಿ ಕುಳಿತ ದಾಸಿಮಯ್ಯನ ಮುಂದಿಡುತ್ತಾಳೆ ತಲೆಗೆ ಹೊದ್ದುಕೊಳ್ಳಲು ವಸ್ತ್ತ್ರ ತೆಗೆದುಕೊಡಲು ಹೇಳುತ್ತಾನೆ. ಅವನ ಹೆಗಲ ಮೇಲೆಯೇ ಇದ್ದ ವಸ್ತ್ತ್ರವನ್ನು ದುಗ್ಗಳೆ ತೆಗೆದು ಅವನ ತಲೆಯ ಮೇಲಿರಿಸುತ್ತಾಳೆ.
ಕುಡಿಯಲು ತಂದಿಟ್ಟ ತಂಗಳು ಅಂಬಲಿ ಬಾಯಿ ಸುಟ್ಟಿತು ಆರಿಸಿಕೊಡು ಎಂದು ಹೇಳಲು ದುಗ್ಗಳೆ ಅಂಬಲಿಗೆ ಗಾಳಿ ಹಾಕುತ್ತಾಳೆ ಇದನ್ನೆಲ್ಲ ನೋಡುತ್ತ ಕುಳಿತಿದ್ದ ಆ ಸಾಧಕ ಯುವಕರು ಮುಸಿಮುಸಿ ನಗುತ್ತಿರುತ್ತಾರೆ. ಆಗ ದಾಸಿಮಯ್ಯನು ಸಾಧಕರೆ ಎದಿರು ನುಡಿಯದೆ ಸಂಸಾರದ ಒಳ ಅರಿವನ್ನು ಅರಿತು ಸೇವೆ ಮಾಡಿಕೊಂಡಿರಬಲ್ಲ ನಮ್ಮ ದುಗ್ಗಳೆಯಂಥ ಸತಿ ಇದ್ದರೆ ಸಂಸಾರ ಲೇಸು ಇಲ್ಲದಿದ್ದರೆ ಸನ್ಯಾಸ ಲೇಸು ಎಂದು ಹೇಳುತ್ತಾನೆ. ‘ಸತಿ ಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ’ ದಾಸಿಮಯ್ಯನ ನುಡಿ.ಶರಣರು ದಾಂಪತ್ಯ ಜೀವನಕ್ಕೆ ಹೆಚ್ಚಿನ ಮಹತ್ವ ಕೊಟ್ಟಿದ್ದಾರೆ.ಸ್ತ್ರೀಯರನ್ನು ಗೌರವಿಸಿದವರು ದಾಸಿಮಯ್ಯನವರೇ ಮೊದಲಿಗರಾಗಿದ್ದರೆ.

"ಬಂದುದನರಿದು ಬಳಸುವಳು
ಬಂದುದ ಪರಿಣಾಮಿಸುವಳು
ಬಂಧು ಬಳಗದ ಮರೆಸುವಳು
ದುಗ್ಗಳೆಯ ತಂದು ಬದುಕಿದೆನು ಕಾಣಾ ರಾಮನಾಥ"
ಎಂದು ನನ್ನ ಜೀವನ ಸಾಕ್ಷಾತ್ಕಾರವಾಯಿತು ಎಂದು ಹೇಳಿದ್ದಾರೆ.

ತವನಿಧಿ ಪಡೆದ ಪ್ರಸಂಗ:- ನೇಯ್ಗೆ ಕಾಯಕದಲ್ಲಿ ಪರಿಣಿತನಾದ ದಾಸಯ್ಯನು ಹನ್ನೆರಡು ವರ್ಷ ಕಷ್ಟಪಟ್ಟು ಒಂದು ಸುಂದರವಾದ ಬಹುಬೆಲೆಯುಳ್ಳ ಹೊದೆಯುವ ವಸ್ತುವನ್ನು ನೇಯ್ದಿರುತ್ತಾನೆ. ಅದನ್ನು ಮಾರಲು ಸಂತೆಗೆ ಒಯ್ಯುತ್ತಾನೆ. ಬಹು ಬೆಲೆಯುಳ್ಳ ಆ ವಸ್ತ್ತ್ರವನ್ನು ಕೊಳ್ಳಲು ಯಾರೂ ಬರಲಿಲ್ಲ. ದಾಸಿಮಯ್ಯ ಮನೆಗೆ ಮರಳಿ ಬರುವಾಗ ಒಬ್ಬ ಜಂಗಮನು ಆ ದಿವ್ಯಾಂಬರವನ್ನು ಬೇಡುತ್ತಾನೆ. ದಾಸಿಮಯ್ಯ ಒಂದೂ ವಿಚಾರಿಸದೆ ಅದನ್ನು ಜಂಗಮನಿಗೆ ಕೊಟ್ಟು ಬಿಡುತ್ತಾನೆ. ಜಂಗಮನು ಆ ದಿವ್ಯಾಂಬರವನ್ನು ದಾಸಿಮಯ್ಯನ ಎದುರಿಗೆ ಹರಿದು ಚೂರು ಮಾಡಿ ಗಾಳಿಯಲ್ಲಿ ತೂರುತ್ತಾನೆ. ದಾಸಿಮಯ್ಯ ಸ್ವಲ್ಪವೂ ವಿಚಲಿತನಾಗಲಿಲ್ಲ ಅವನ ಜಂಗಮನನ್ನು ಮನೆಗೆ ಕರೆದುಕೊಂಡು ಹೋಗಿ ಸತ್ಕರಿಸುತ್ತಾನೆ.
ದಂಪತಿಗಳ ಜಂಗಮ ನಿಷ್ಠೆಗೆ ಸಂಪ್ರೀತನಾಗಿ ಜಂಗಮನಾಗಿ ಬಂದ ಶಿವನು ತನ್ನ ನಿಜರೂಪ ತೋರಿ ಅವರಿಗೆ ತವನಿಧಿ (ಅಕ್ಷಯ ಪಾತ್ರೆ) ದಯಪಾಲಿಸಿ ಬಯಲಾಗುತ್ತಾನೆ . ತವನಿಧಿ ಪಡೆದುಕೊಂಡ ಆ ದಂಪತಿಗಳು ದೀನ ದಲಿತರಿಗೆ ಶರಣನಿಗೆ ದಾಸೋಹ ಮಾಡುತ್ತ ಕಾಲ ಕಳೆಯುತ್ತಿದ್ದರು.ಇದು ಇವರಿಗೆ ದೇವರು ಕೊಟ್ಟ "ತವನಿಧಿಯೇ" ಆಗಿದೆ. ಈ ಪ್ರತಿರೂಪ ಇಂದಿಗೂ ಸಪ್ತ ತೀರ್ಥಗಳ ಮೂಲಕ ಮುದನೂರಿನಲ್ಲಿ ಜೀವಂತ ವಾಗಿ ಕಾಣುತ್ತೇವೆ . ಸಪ್ತ ತೀರ್ಥಗಳು ಎಂದರೆ ೧. ರಾಮತೀರ್ಥ , ೨. ಲಕ್ಷ್ಮಣ ತೀರ್ಥ, ೩.ಸಕ್ಕರೆ ತೀರ್ಥ ೪. ಮರಳು ತೀರ್ಥ , ೫. ಪಾಂಡವ ತೀರ್ಥ, ೬. ಹಾಲು ತೀರ್ಥ ,೭. ಸಂಗಮ ತೀರ್ಥ ಗಳಾಗಿ ಕಾಣಬಹುದಾಗಿದೆ.
ಮನುಷ್ಯ ಜನ್ಮ, ಮುಕ್ತಿ ಹೊಂದುವುದು ಮತ್ತು ಮಹಾಜನರ ಸತ್ಸಂಗ ಈ ಮೂರು ಸಿಗುವುದು ದೇವರ ಅನುಗ್ರಹ ಮಾತ್ರ ಸಾಧ್ಯ ಆದ್ದರಿಂದ ದಾಸವರೇಣ್ಯರು ಹಾಡಿರುವ "ಮಾನವ ಜನ್ಮ ದೊಡ್ಡದು, ಇದನ್ನು ಹಾನಿ ಮಾಡಲು ಬೇಡಿ ಹುಚ್ಚಪ್ಪಗಳಿರಾ" ಎಂದಿರುವಂತೆ ನಾವುಗಳು, ಯಾರು? ನಮ್ಮ ಕುಲಕಸುಬು ಏನು? ನಮ್ಮ ದೇವರು ಯಾರು? ನಮ್ಮಲ್ಲಿ ಆಗಿಹೋಗಿರುವ ಮಹಾತ್ಮರು ಯಾರು ? ಮೊದಲಾದ ವಿಷಯಗಳನ್ನು ತಿಳಿದುಕೊಳ್ಳುವುದು ತುಂಬಾ ಅವಶ್ಯಕ.
ದೇವರ ದಾಸಿಮಯ್ಯನವರು ತಮ್ಮ ಆದ್ಯಾತ್ಮ ಸಿರಿವಂತಿಕೆಯಿಂದ ಮೆರೆದು, ಶಿವನ ಹೆಜ್ಜೆಯಲ್ಲಿ ಹೆಜ್ಜೆಯನಿಟ್ಟು, ತಮ್ಮ ಹೆಜ್ಜೆ ಪಾಡುಗಳನ್ನು ನಮಗಾಗಿ ಉಳಿಸಿಹೋಗಿದ್ದಾರೆ. ಇವುಗಳನ್ನು ಅನುಸರಿಸಿ ನಡೆದರೆ ಸಾಕು ನಮ್ಮ ಬಾಳು ಬೆಳಕಾಗುವುದು ಇಂತಹ ಮಹಾಪುರುಷನನನ್ನು ಪಡೆದ ದೇವಾಂಗ ಸಮಾಜವೇ ದನ್ಯ.