ಆದ್ಯ ವಚನಕಾರ - ವಚನ ಬ್ರಹ್ಮ ದೇವರ ದಾಸಿಮಯ್ಯನವರು
Vachana Brahamana Vachanamrutha
ಹಂಪಿ ಹೇಮಕೂಟ ಶ್ರೀ ಗಾಯತ್ರಿ ಪೀಠ ಮಹಾಸಂಸ್ಥಾನದ ಪರಮಪೂಜ್ಯ
ಶ್ರೀ ಶ್ರೀ ಶ್ರೀ ದಯಾನಂದಪುರಿ ಮಹಾಸ್ವಾಮೀಜಿಯವರ
ಆಶೀರ್ವಚನದೊಂದಿಗೆ ವಚನ ಬ್ರಹ್ಮನ ವಚನಾಮೃತ ಧ್ವನಿ ಸುರಳಿ ಬಿಡುಗಡೆ

ನಮ್ಮದು ಭರತ ಭೂಮಿ. ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ರಾಷ್ಟ್ರ! ಪ್ರಪಂಚದಲ್ಲಿ ಮಿಕ್ಕ ದೇಶಗಳು ಭೌತಿಕವಾಗಿ ಸಮೃದ್ಧವಾಗಿರಬಹುದು, ಆದರೆ ಭೌತಿಕವಾಗಿ ಮಾತ್ರವಲ್ಲದೆ ಆಧ್ಯಾತ್ಮಕವಾಗಿಯೂ ಅತ್ಯಂತ ಸಮುದ್ಧವಾದ ದೇಶ 'ಭಾರತ'. ಆದಿ ಕಾಲದಿಂದಲೂ ಅನೇಕ ಋಷಿ-ಮುನಿಗಳು ತಮ್ಮ ಅಮೋಘ ತಪಸ್ಸಿನಿಂದ ಸಿದ್ಧಿಯನ್ನು ಪಡೆದು ಆಧ್ಯಾತ್ಮಿಕತೆಯ ಮಹತ್ವವನ್ನು ಇಡೀ ವಿಶ್ವಕ್ಕೆ ಸಾರಿದ ಪುಣ್ಯ ಭೂಮಿಯಿದು.ಅಂತಹ ಸಾಧುಗಳಲ್ಲೊಬ್ಬರು 'ಶ್ರೀ ದೇವರ ದಾಸಿಮಯ್ಯ'. ಈ ಪುಣ್ಯ ಪುರುಷನ ಬಗ್ಗೆ ಹಲವರಿಗೆ ಪರಿಚಯವಿಲ್ಲ. ಇವರು ಕೇವಲ ಒಬ್ಬ ಮುನಿ ಮಾತ್ರವಲ್ಲದೆ, 10 /11 ನೇ ಶತಮಾನದಲ್ಲಿದ್ದ ಮೊಟ್ಟಮೊದಲ ವಚನಕಾರರೂ ಹೌದು. ಹಾಗಾಗಿ ಈ ಮಹರ್ಷಿಯ ಒಂದು ಕಿರುಪರಿಚಯ
ದೇವರ ದಾಸಿಮಯ್ಯನವರು ಶತ - ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಶರಣರಿಗಿಂತಲೂ (ಬಸವಣ್ಣ ಮತ್ತು ಅಕ್ಕಮಹಾದೇವಿ ಯವರಿಗೂ),ಮುಂಚಿತವಾಗಿದ್ದಂತಹ,ಮೊಟ್ಟ ಮೊದಲ ವಚನಕಾರರಾಗಿದ್ದರು .ದೇವರ ದಾಸಿಮಯ್ಯನವರ ವಚನಗಳನ್ನು ರಚಿಸಿರುವವರಲ್ಲಿ ಮೊದಲಿಗ ರಾದರೂ ಸಹ ಅವರ ವಚನಗಳು ಯಾರಿಗೂ ತಿಳಿದಿಲ್ಲ. ನಂತರ ಬಂದ ಎಲ್ಲಾ ಶರಣರೂ, ಸಾಧು ಸಂತರೂ ರಚಿಸಿದ ವಚನಗಳು ಬಳಕೆಗೆ ಮತ್ತು ಬೆಳಕಿಗೂ ಬ೦ದವು. ದಾಸಿಮಯ್ಯನವರನ್ನುದೇವರ ದಾಸಿಮಯ್ಯ, ದೇವಲ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಎಂಬ ಹೆಸರಿನಿಂದ ಕರೆಯಲ್ಪಡುತ್ತಾರೆ.
ಇವರ ಪತ್ನಿ ದುಗ್ಗಳೆ. ಇಬ್ಬರದೂ ಅನ್ಯೋನ್ಯವಾದ ದಾಂಪತ್ಯ ಜೀವನ. ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ, ಭಕ್ತಿ ಮಾರ್ಗವೇ ಉನ್ನತ ಎಂದು ಸಾರಿದವರು. ಇವರು ರಾಮನಾಥ ಎಂಬ ದೇವರಲ್ಲಿ ಅಪಾರವಾದ ಭಕ್ತಿಯನ್ನು ಇಟ್ಟು ಕೊಂಡಿದ್ದು "ರಾಮನಾಥ" ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ. ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನಸೂರೆಗೊಳ್ಳುತ್ತವೆ.
ದಾಸಿಮಯ್ಯನವರ ವಚನಗಳು ಅರ್ಥೈಸಿಕೊಳ್ಳಲು ಬಹಳ ಸರಳವಾಗಿದ್ದು, ಸಮಾಜಕ್ಕೆ ವಿಶೇಷವಾದ ಧಾರ್ಮಿಕ ಪ್ರಜ್ಞೆಯ ಸ್ಪೂರ್ತಿಯ ಚಿಲುಮೆಯಾಗಿವೆ. ಆದರೆ ವಿಷಾದದ ಸಂಗತಿಯೆಂದರೆ ಇವರ ಬಗ್ಗೆ ಹೆಚ್ಚಿಗೆ ಪ್ರಚಾರಗಳಾಗಲಿಲ್ಲ. ತಡವಾಗಿಯಾದರೂ ಈಗೀಗ ಕೆಲವರು ದೇವಲರ ವಚನಗಳನ್ನು ಹೊರತರುತ್ತಿದ್ದಾರೆ. ಅವರ ಉಪಲಬ್ಧ ವಚನಗಳಲ್ಲಿ ಉತ್ಕಟವಾದ ವೀರಶೈವ ನಿಷ್ಠೆ, ನಿಷ್ಠುರವಾದ ಸ್ಪಷ್ಟ ವಾಕ್ಯತೆ, ಮಾರ್ಮಿಕವಾದ ಸಂಕ್ಷಿಪ್ತ ಶೈಲಿ, ಔಚಿತ್ಯಪೂರ್ಣವಾದ ದೃಷ್ಟಾಂತಗಳ ಸಂಪತ್ತಿಯ ಗುಣಗಳು ಎದ್ದು ಕಾಣುತ್ತವೆ. ದೇವರ ದಾಸಿಮಯ್ಯನವರು ವಿಶ್ವದ ಪ್ರಥಮ ವಚನಕಾರ. ಅವರು ರಾಮನಾಥ ಎಂಬ ಹೆಸರಲ್ಲಿಯೇ 176 ವಚನಗಳನ್ನು ರಚಿಸಿದ್ದಾರೆ. ಈ ಎಲ್ಲಾ ವಚನಗಳಿಗೂ ರಾಗ ಸಂಯೋಜನೆ - ಗಾಯನ ಮತ್ತು ಭಾವಾರ್ಥ ವನ್ನು ದ್ರಶ್ಯ ಮಾದ್ಯಮದಲ್ಲಿ ಅಳವಡಿಸಲಾಗಿದೆ.

This audio CD contains multiple Vachanas of Devara Dasimayya the first Vachanakara of 10th Century.This CD consists of Vachanas in the form of Songs sung by noted singers. The songs are followed by a detailed narration of the Bhavartha ie meaning of the Vachanas in simple language for easy understanding to the common man.