Sree Devala Devanga Maharshi Devara Dasimayya
About Devala Maharshi & Devanga Purana
ದೇವಾಂಗ ಕುಲಗುರು ಪ್ರಥಮ ವಚನಕಾರ ದೇವರ ದಾಸಿಮಯ್ಯನವರು
ದೇವರ ದಾಸಿಮಯ್ಯನವರು ಶತ-ಶತಮಾನಗಳಿಂದ ಬಂದಂತಹ ದಕ್ಷಿಣ ಭಾರತದಲ್ಲಿ ಹೆಸರಾದ ಪ್ರಸಿದ್ಧ ಶರಣರಿಗಿಂತಲೂ, ಮೊದಲು ಬಂದಂತಹ ಮೊಟ್ಟ ಮೊದಲ ವಚನಕಾರರಾಗಿದ್ದಾರೆ. ಇವರೇ ವಚನಗಳಿಗೆ ತಳಹದಿ ನೀಡಿದವರು. ವಚನಗಳನ್ನು ತಮ್ಮ ಸಾಮಾಜಿಕಜೀವನದಲ್ಲಿಯೇ ಕಂಡುಕೊಂಡು ರಚಿಸಿದರು. ದೇವರ ದಾಸಿಮಯ್ಯನವರ ವಚನಗಳನ್ನು ರಚಿಸಿರುವವರಲ್ಲಿ ಮೊದಲಿಗರಾದರೂ ಸಹ ಅವರ ವಚನಗಳು ಯಾರಿಗೂ ತಿಳಿದಿಲ್ಲ. ನಂತರ ಬಂದ ಎಲ್ಲಾ ಶರಣರೂ,ಸಾಧು ಸಂತರೂ ರಚಿಸಿದ ವಚನಗಳು ಬಳಕೆಗೆ ಮತ್ತು ಬೆಳಕಿಗೂ ಬ೦ದವು. ದಾಸಿಮಯ್ಯನವರು, ದೇವರ ದಾಸಿಮಯ್ಯ, ದೇವಲ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಎಂಬ ಹೆಸರಿನಿಂದ ಕರೆಯಲ್ಪಡುತ್ತಾರೆ. ಅವರು ರಾಮನಾಥ ಎಂಬ ದೇವರಲ್ಲಿ ಅಪಾರವಾದ ಭಕ್ತಿಯನ್ನು ಇಟ್ಟು ಕೊಂಡಿದ್ದರು. "ರಾಮನಾಥ" ಎನ್ನುವ ಹೆಸರಲ್ಲಿಯೇ ವಚನಗಳನ್ನು ರಚಿಸಿದರು. ಸೀರೆ ನೇಯುತ್ತಾ ತಮ್ಮ ಪ್ರಾಪಂಚಿಕ ಜೀವನದಲ್ಲಿ ಸಂಸಾರ ಸಾಗಿಸುತ್ತಾ, ಭಕ್ತಿ ಮಾರ್ಗವೇ ಉನ್ನತ ಎಂದು ಸಾರಿದವರು. ಸೀರೆ ನೇಯುವ ಕೆಲಸದಿಂದ ಜೀವನ ಸಾಗಿಸುತ್ತಿದ್ದ ಇವರು "ರಾಮನಾಥ" ಎನ್ನುವ ನಾಮಂಕಿತವನ್ನು ಕೊಟ್ಟು ಅನೇಕ ವಚನಗಳನ್ನು ರಚಿಸಿದ್ದಾರೆ. ತುಂಬಾ ಉಪಯುಕ್ತ ಮತ್ತು ತಮ್ಮ ದಿನನಿತ್ಯದ ಜೀವನಕ್ಕೆ ಸಂಭಂದಿಸಿದ ವಿಷಯಗಳ ಬಗ್ಗೆಯೆ ರಚಿಸಿದ ದೇವರ ದಾಸಿಮಯ್ಯ ಅವರ ವಚನಗಳು ತುಂಬಾ ಸರಳವಾಗಿ ಮನೆಸೂರೆಗೊಳ್ಳುತ್ತವೆ.